ನ್ಯೂಯಾರ್ಕ್ (ವಿಶ್ವ ಕನ್ನಡಿಗ ನ್ಯೂಸ್) : ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಪಶ್ಚಿಮ ಮ್ಯಾಸಚೂಸೆಟ್ಸ್ನಲ್ಲಿ ಮುಂಜಾನೆ ಈ ಅಪಘಾತ ಸಂಭವಿಸಿದ್ದು, ಅವರು ಪ್ರಯಾಣಿಸುತ್ತಿದ್ದ ವಾಹನವು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಮೃತರನ್ನು ಪ್ರೇಮಕುಮಾರ್ ರೆಡ್ಡಿ ಗೋಡಾ (27), ಪಾವನಿ ಗುಲ್ಲಪಲ್ಲಿ (22) ಮತ್ತು ಸಾಯಿ ನರಸಿಂಹ ಪತಂಶೆಟ್ಟಿ (22) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐದು ಜನರು ಗಾಯಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.