ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ರಾಷ್ಟ್ರೀಯ ಸಮಿತಿ ಆಯೋಜಿಸಿದ್ದ ಪ್ರವಾದಿ ಮುಹಮ್ಮದ್ ﷺ ಮಾನವೀಯತೆಯ ಮಹಾನಾಯಕ ಎಂಬ ವಿಷಯದಲ್ಲಿ ಒಮಾನ್ ರಾಷ್ಟ್ರೀಯ ಮಟ್ಟದಲ್ಲಿ ನಡೆಸಿದ 2022 ಪ್ರಬಂಧ ಸ್ಪರ್ಧೆಯ ವಿಜೇತರನ್ನು ಪ್ರಕಟಿಸಲಾಯಿತು.
ಪ್ರಥಮ ಸ್ಥಾನ ಪಡೆದ ಮಸ್ಕತ್ ಝೋನಿನ ಸದಸ್ಯರಾದ ಮುಹಮ್ಮದ್ ಆಸಿಫ್ ಇಕ್ಬಾಲ್ ಕಾನ ಹಾಗೂ ದ್ವಿತೀಯ ಸ್ಥಾನ ಗಳಿಸಿದ ನಜಿಮ್ಮುನ್ನಿಸಾ ನಝೀರ್ ಮಸ್ಕತ್ ಝೋನ್ ಇವರಿಗೆ ಕೆ ಸಿ ಎಫ್ ಒಮಾನ್ ರಾಷ್ಟ್ರೀಯ ಸಮಿತಿ ಇಂದು ಸೀಬ್ ಝೋನಿನಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ , ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, ಶಿಕ್ಷಣ ವಿಭಾಗದ ಅಧ್ಯಕ್ಷ ಝುಬೈರ್ ಸ ಅದಿ ಪಾಟ್ರಕೋಡಿ, ಇಹ್ಸಾನ್ ಕರ್ನಾಟಕ ಒಮಾನ್ ವಿಭಾಗದ ಅಧ್ಯಕ್ಷ ಇಕ್ಬಾಲ್ ಎರ್ಮಾಳ್, ಆಡಳಿತ ವಿಭಾಗದ ಅಧ್ಯಕ್ಷ ಸಿದ್ದೀಕ್ ಮಾಂಬ್ಳಿ ಸುಳ್ಯ , ಶಿಕ್ಷಣ ವಿಭಾಗದ ಕಾರ್ಯದರ್ಶಿ ನವಾಝ್ ಮಣಿಪುರ ಇವರು ವಿಜೇತರಿಗೆ ಬಹುಮಾನ ಕೊಟ್ಟು ಸನ್ಮಾನಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.