(www.vknews.in) ಮಂಗಳೂರು: ಸಮೃದ್ಧ, ಸದೃಢ, ಸ್ವಾಭಿಮಾನ ಕರ್ನಾಟಕ ಎಸ್ ಡಿಪಿಐ ಸಂಕಲ್ಪ ಎಂಬ ಧ್ಯೇಯದೊಂದಿಗೆ “ಒಲವಿನ ಕರ್ನಾಟಕ ” ಶೀರ್ಷಿಕೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಎಸ್ ಡಿಪಿಐ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮ ನಡೆಸುತ್ತಿದ್ದು ಇದರ ಭಾಗವಾಗಿ ಎಸ್ ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಪುರಭವನದ ಮುಂಭಾಗದಲ್ಲಿ ನವೆಂಬರ್ 1 ರಂದು ಸಂಜೆ,6-30ಕ್ಕೆ ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಭಾ ಕಾರ್ಯಕ್ರಮಗಳೊಂದಿಗೆ ಜಾನಪದ ಹಾಡು, ಮಿಮಿಕ್ರಿ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಇನ್ನಿತರ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಎಸ್ ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು ಮುಂಗಡವಾಗಿ 9880842882 ಈ ನಂಬರಿಗೆ ಕರೆ ಮಾಡಿ ನೊಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.