ಬೆಳ್ಳಾರೆ (ವಿಶ್ವ ಕನ್ನಡಿಗ ನ್ಯೂಸ್) : ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ನಾರು ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಲೆ ಮರೆಸಿಕೊ೦ಡಿದ್ದು, ಆರೋಪಿಗಳ ಗುರುತು ಪತ್ತೆಗೆ ಎನ್ ಐ ಎ ನಗದು ಬಹುಮಾನ ಘೋಷಿಸಿದೆ.
ಘಟನೆ ನಡೆದು ಎರಡು ತಿಂಗಳು ಕಳೆದರೂ ಕೆಲ ಆರೋಪಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ತಲೆಮರೆಸಿಕೊ೦ಡ ಆರೋಪಿಗಳಾದ ಮಹಮ್ಮದ್ ಮುಸ್ತಾಫ ಬೆಳ್ಳಾರೆ, ತುಫೈಲ್ ಮಡಿಕೇರಿ ಅವರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 5 ಲಕ್ಷ, ಅಲ್ಲದೇ ಉಮ್ಮರ್ ಫಾರೂಕ್ ಸುಳ್ಯ, ಅಬೂಬಕ್ಕರ್ ಸಿದ್ದೀಕ್ ಬೆಳ್ಳಾರೆ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.