ಮಸ್ಕತ್ (ವಿಶ್ವ ಕನ್ನಡಿಗ ನ್ಯೂಸ್) : ಅನಿವಾಸಿ ಭಾರತೀಯರೊಬ್ಬರು ಊರಿಗೆ ಹಿಂದಿರುಗಲು ತೆರಳುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಕೇರಳದ ಆಲಪ್ಪುಝ ವಲ್ಲಿಕುನ್ನಂನ ಅಹಮ್ಮದ್ ಸಲೀಂ ಅವರ ಪುತ್ರ ನಾಸೀರ್ ಮುಹಮ್ಮದ್ (58) ಎಂದು ಗುರುತಿಸಲಾಗಿದೆ.
ಮಸ್ಕತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ರೌವಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಮೃತರು ತಾಯಿ, ಪತ್ನಿ, ಮಕ್ಕಳು, ಸಹೋದರ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶವಾಗಾರದಲ್ಲಿ ಇರಿಸಲಾಗಿರುವ ದೇಹವನ್ನು ಮರಳಿ ತರುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.