(www.vknews.in) ಕೆಮ್ಮಾರ:- ಇಲ್ಲಿನ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಯಶ್ರೀ ಎಮ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ, ಪಂಚಾಯತ್ ಸದಸ್ಯೆ ಶ್ರೀಮತಿ ವಾರಿಜಾಕ್ಷಿ ಬಡ್ಡಮೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ ಬಡಿಲ, ಅಬ್ಬಾಸ್,ಖಾದರ್,ಸುಮಯ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಧ್ಯಾಪಕರಾದ ವೆಂಕಟರಮಣ ಭಟ್, ಜುನೈದ್, ಶಹನಾಝ್, ಶ್ರೀಮತಿ ಮೆಹನಾಝ್, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು ಹಾಗೂ ಪೋಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಸುಮನಾ ವಂದನಾರ್ಪಣಿ ಮತ್ತು ಕಾರ್ಯಕ್ರಮ ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.