ಕೊಪ್ಪಳ,(ವಿಶ್ವ ಕನ್ನಡಿಗ ನ್ಯೂಸ್): ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶದ ಅಭಿವೃಧ್ಧಿಗೆ ಎಲ್ಲರು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಝೀಯಾ ತರುನ್ನುಮ್ ಹೇಳಿದರು.
ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ನಂತರ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮತ್ತು ನೈರ್ಮಲ್ಯ ಕಾಪಾಡಲು ಪೂರಕವಾಗಿರುವ ನರೇಗಾ ಯೋಜನೆಯ ಮಹತ್ವದ ಕುರಿತು ಪ್ರತಿಯೊಬ್ಬರು ಅರಿತುಕೊಂಡು ಜಾಬ್ ಕಾರ್ಡ್ ಪಡೆದುಕೊಂಡು ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.
ನರೇಗಾ ಯೋಜನೆಯ ಮೂಲಕ ಈಗಾಗಲೇ ಅನೇಕ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಜಲಮೂಲಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ ಗ್ರಾಮೀಣ ಪ್ರದೇಶದ ಜನರು ನರೇಗಾ ಯೋಜನೆಯ ಮೂಲಕ ದೊರೆಯುವ ಸೌಲಭ್ಯಗಳ ಕುರಿತು ಆಯಾ ಗ್ರಾಮ ಪಂಚಾಯಿತಿಗಳ ಮೂಲಕ ಮಾಹಿತಿ ಪಡೆದುಕೊಂಡು ವೈಯಕ್ತಿಕ ಮತ್ತು ಸಮುದಾಯದ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ವೇಳೆಯಲ್ಲಿ ಮಜಿನರೇಗಾ ಯೋಜನೆಯ ಮೂಲಕ ಕೈಗೊಂಡಿರುವ ಅಭಿವೃಧ್ಧಿ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಣೆ ಮಾಡಿದರಲ್ಲದೆ ಮುಂದಿನ ದಿನಗಳಲ್ಲಿ ಅನುಷ್ಠಾನಗೊಳ್ಳಬೇಕಾಗಿರುವ ಅಭಿವೃಧ್ಧಿ ಕಾಮಗಾರಿಗಳ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕಾರಟಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರಸಪ್ಪ, ನರೇಗಾ ಸಹಾಯಕ ನಿರ್ದೇಶಕಿ ವನುಜ, ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.