ಕಲಬುರಗಿ (ವಿಶ್ವ ಕನ್ನಡಿಗ ನ್ಯೂಸ್) : ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ 70 ವರ್ಷದ ವೃದ್ಧೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 28 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಬಂಧಿತ ಯುವಕ ಸಂತೋಷ್, ವೃದ್ಧೆಯ ನೆರೆಹೊರೆಯವರು. ಸಂತ್ರಸ್ತೆ ಲಾಡಮುಗುಳಿ ಗ್ರಾಮದ ನಿವಾಸಿಯಾಗಿದ್ದು, ಮೊಮ್ಮಗಳ ಜೊತೆ ಇರಲು ಬಂದಿದ್ದರು.
ಪೊಲೀಸರ ಪ್ರಕಾರ, ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದಾಗ ಆರೋಪಿ ಸಂತೋಷ್ ಮನೆಗೆ ನುಸುಳಿ ಈ ಕೃತ್ಯ ಎಸಗಿದ್ದಾನೆ. ಮನೆಗೆ ಹಿಂತಿರುಗಿದ ಮೊಮ್ಮಗಳು ವೃದ್ಧೆಯ ಮೇಲೆ ಹಲ್ಲೆ ನಡೆಸುತ್ತಿದ್ದಾಗ ಆರೋಪಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಸಂತ್ರಸ್ತೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಕೆಯ ವೈದ್ಯಕೀಯ ಪರೀಕ್ಷೆ ನಡೆಸಿ ಆರೋಪಿ ಸಂತೋಷನನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.