ಅಹಮದಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಗುಜರಾತಿನಲ್ಲಿ ಹತ್ತು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನಾಯಕರೊಬ್ಬರು ಪಕ್ಷ ತೊರೆದಿದ್ದಾರೆ. ಮೋಹನ್ ಸಿಂಗ್ ರಥ್ವಾ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದಿದ್ದಾರೆ. ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೂರ್ ಅವ್ರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ.
ಚೋಟಾ ಉದಯಪುರದ ಮೀಸಲು ಕ್ಷೇತ್ರದಿಂದ ಶಾಸಕರಾಗಿರುವ ಮೋಹನ್ಸಿಂಗ್ ಅವರು ಬುಡಕಟ್ಟು ಪ್ರದೇಶಗಳಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ಈ ಬಾರಿ ಸ್ಪರ್ಧಿಸುತ್ತಿಲ್ಲ ಬದಲಿಗೆ ಮಗನನ್ನೇ ಕಣಕ್ಕಿಳಿಸುತ್ತೇನೆ ಎಂದರು. ನಾನು ವೃದ್ಧ. ಮಗ ಸಿವಿಲ್ ಇಂಜಿನಿಯರ್. ಮಗ ಬಿಜೆಪಿ ಸೇರಲು ಬಯಸಿದ್ದಾರೆ. ಬಿಜೆಪಿ ಅವರ ಮಗನನ್ನು ಕಣಕ್ಕಿಳಿಸುವುದು ಖಚಿತ. ಬುಡಕಟ್ಟು ಪ್ರದೇಶದಲ್ಲಿ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರು ಮಾಡಿರುವ ಕೆಲಸಗಳಿಂದ ಆಕರ್ಷಿತರಾಗಿ ಬಿಜೆಪಿ ಸೇರುತ್ತಿದ್ದೇನೆ ಎಂದು ಮೋಹನ್ಸಿನ್ಹ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.