ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್) : ತುಂಬೆ ಡ್ಯಾಂ ನಲ್ಲಿ ಈಜಲು ಬಂದಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಮೂಲತಃ ಪುತ್ತೂರಿನ ಕೂರ್ನಡ್ಕ ನಿವಾಸಿಯಾಗಿದ್ದ, ಪ್ರಸ್ತುತ ತುಂಬೆ ಸಮೀಪದ ವಳವೂರು ನಿವಾಸಿಯಾಗಿರುವ ಎ.ಕೆ.ಜುನೈದ್ ಎಂಬವರ ಪುತ್ರ ಸಲ್ಮಾನ್ ಫಾರಿಸ್ (16) ಎಂದು ಗುರುತಿಸಲಾಗಿದೆ.
SSLC ವಿದ್ಯಾರ್ಥಿಯಾಗಿದ್ದ ಈತ, ಹಾಗು ಮೂವರು ಸ್ನೇಹಿತರು ಇಂದು ಶಾಲೆಗೆ ರಜೆ ಇದ್ದ ಕಾರಣ ಜುಮಾ ನಮಾಝ್ ಬಳಿಕ ಬಂಟರ ಭವನದ ಹಿಂಭಾಗದಲ್ಲಿರುವ ವೆಂಟೆಡ್ ಡ್ಯಾಮ್ ನಲ್ಲಿ ಈಜಾಡಲು ತೆರಳಿದ್ದಾರೆ. ಈ ವೇಳೆ ನೀರಿಗಿಳಿದ ಸಲ್ಮಾನ್ ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದವರು ಇತರರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.