(ವಿಶ್ವ ಕನ್ನಡಿಗ ನ್ಯೂಸ್) : ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಿ.ಆರ್.ಗವಾಯಿ ನೇತೃತ್ವದ ಪೀಠದಿಂದ ಈ ಆದೇಶ ಹೊರಬಿದ್ದಿದೆ. ಆರೋಪಿಗಳಾದ ನಳಿನಿ ಶ್ರೀಹರ್, ರಾಬರ್ಟ್ ಪ್ಯಾರಿಸ್, ರವಿಚಂದ್ರನ್, ರಾಜಾ, ಶ್ರೀಹರನ್ ಮತ್ತು ಜೈಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಆರೋಪಿಗಳು 30 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದಾರೆ ಮತ್ತು ಜೈಲಿನಲ್ಲಿ ಅವರ ನಡವಳಿಕೆ ತೃಪ್ತಿಕರವಾಗಿದೆ ಎಂದು ನ್ಯಾಯಾಲಯ ಗಮನಿಸಿದೆ. ನಳಿನಿ ಮತ್ತು ಆರ್.ಪಿ. ರವಿಚಂದ್ರನ್ ಅವರನ್ನು ಶೀಘ್ರ ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ಸಕಾರಾತ್ಮಕ ನಿಲುವು ತಳೆದಿತ್ತು.
ಮೇ 21, 1991 ರಂದು ರಾಜೀವ್ ಗಾಂಧಿ ಹತ್ಯೆಯಾಯಿತು. ರಾಜೀವ್ ಗಾಂಧಿ ಅವರು ಚುನಾವಣಾ ಪ್ರಚಾರಕ್ಕಾಗಿ ಚೆನ್ನೈಗೆ ಬಂದಿದ್ದಾಗ ಹತ್ಯೆಯಾಗಿದ್ದರು. ಬಾಂಬ್ ಸ್ಫೋಟದಲ್ಲಿ ರಾಜೀವ್ ಗಾಂಧಿ ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದರು. 45 ಮಂದಿ ಗಾಯಗೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.