ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ಕಿಡ್ನಿಯಲ್ಲಿನ ಕಲ್ಲು ತೆಗೆಯಲು ಶಸ್ತ್ರ ಚಿಕಿತ್ಸೆಗೆ ಒಳಗಾದ ವ್ಯಕ್ತಿಯೊಬ್ಬನಿಗೆ ಕಿಡ್ನಿ ಕಾಣೆಯಾಗಿದೆ. ಯುವಕನ ಕುಟುಂಬದವರು ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಅಲಿಗಢದಲ್ಲಿ ಈ ಘಟನೆ ನಡೆದಿದೆ. ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ 53 ವರ್ಷದ ಸುರೇಶ್ ಚಂದ್ರ ಅವರು ಕಿಡ್ನಿ ಕಳೆದುಕೊಂಡಿದ್ದಾರೆ. ಆರು ತಿಂಗಳ ಹಿಂದೆ ಕಲ್ಲು ತೆಗೆಯುವ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಇದಾದ ನಂತರವೂ ನೋವು ಕಡಿಮೆಯಾಗಿಲ್ಲ. ನಂತರ ಅವರು ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಪರೀಕ್ಷೆ ವೇಳೆ ಕಿಡ್ನಿ ಕಾಣೆಯಾಗಿರುವುದು ಪತ್ತೆಯಾಗಿದೆ.
ಖಾಸಗಿ ಆಸ್ಪತ್ರೆ ವಿರುದ್ಧ ದೂರು ಬಂದ ನಂತರ ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಯುಪಿ ಆರೋಗ್ಯ ಇಲಾಖೆ ತಿಳಿಸಿದೆ. ಸುರೇಶ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 14 ರಂದು ಅಲಿಗಢದ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಸುರೇಶ್ ಅವರ ಎಡ ಮೂತ್ರಪಿಂಡದಲ್ಲಿ ಕಲ್ಲು ಇರುವುದು ಪತ್ತೆಯಾಗಿತ್ತು. ಅದೇ ದಿನ ಶಸ್ತ್ರಚಿಕಿತ್ಸೆ ನಡೆಸಿ ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೂರು ದಿನಗಳ ನಂತರ ಐಸ್ಚಾರ್ಜ್ ಮಾಡಲಾಗಿದೆ.
ನಂತರ, ತೀವ್ರ ನೋವಿನಿಂದ ಅವರು ಕಾಸ್ಗಂಜ್ ಆಸ್ಪತ್ರೆಯಲ್ಲಿ ವೈದ್ಯರನ್ನು ಸಂಪರ್ಕಿಸಿದರು ಮತ್ತು ನಂತರ ಸ್ಕ್ಯಾನ್ ಮಾಡುವಾಗ ಎಡ ಮೂತ್ರಪಿಂಡವು ಕಾಣೆಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ತಿಳಿದು ಆಘಾತವಾಯಿತು ಎನ್ನುತ್ತಾರೆ ಸುರೇಶ್. ಘಟನೆ ಕುರಿತು ಆಸ್ಪತ್ರೆಯನ್ನು ಸಂಪರ್ಕಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಖಾಸಗಿ ಆಸ್ಪತ್ರೆಯ ಅಧಿಕಾರಿಗಳು ತನಗೆ ತಿಳಿಯದಂತೆ ಎಡ ಮೂತ್ರಪಿಂಡವನ್ನು ತೆಗೆದಿದ್ದಾರೆ ಎಂದು ಸುರೇಶ್ ಚಂದ್ರ ಯುಪಿ ಆರೋಗ್ಯ ಇಲಾಖೆಗೆ ದೂರು ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.