ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಸುರತ್ಕಲ್ ಟೋಲ್’ಗೇಟ್ ವಿರೋಧಿ ಹೋರಾಟ ಸಮಿತಿ ಕಳೆದ 17 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ಮಧ್ಯೆ ಅಕ್ರಮವಾಗಿ ನಿರ್ಮಿಸಲಾಗಿರುವ ಟೋಲ್ ಸಂಗ್ರಹ ಗೇಟ್ ಅನ್ನು ರದ್ದುಪಡಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.