ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್) ನಿರ್ಧರಿಸಿದೆ. ಕೆಎಂಎಫ್ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು.
ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದರು. ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಸರ್ಕಾರ ಬೆಲೆ ಏರಿಕೆಗೆ ಅನುಮೋದನೆ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ಹೊಸದರ ಜಾರಿಯಾಗಲಿದ್ದು, ನಾಳೆ ಬೆಳಗ್ಗೆಯಿಂದ ನಂದಿನಿ ಹಾಲು, ಮೊಸರು ತಲಾ 3 ರೂಪಾಯಿ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.