ಅಹಮದಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುಜರಾತ್ ಚುನಾವಣೆಯ ಹಿನ್ನೆಲೆಯಲ್ಲಿ ಮಾಧ್ಯಮವೊಂದಕ್ಕೆ ನೀಡಲಾದ ವಿಶೇಷ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಅವರು ಜಾತ್ಯತೀತ ದೇಶದಲ್ಲಿ ಕಾನೂನು ಎಲ್ಲ ನಾಗರಿಕರಿಗೂ ಸಮಾನವಾಗಿರಬೇಕು ಎಂದರು.
ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ಅಮಿತ್ ಶಾ ಕಾಂಗ್ರೆಸ್ಗೆ ಸೂಚಿಸಿದರು. 1950ರಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು ನಮ್ಮ ಚುನಾವಣಾ ಭರವಸೆಯಾಗಿದೆ. ಯಾವುದೇ ಜಾತ್ಯತೀತ ದೇಶದಲ್ಲಿ ಎಲ್ಲಾ ಧರ್ಮಗಳಿಗೆ ಸೇರಿದ ನಾಗರಿಕರಿಗೆ ಕಾನೂನುಗಳು ಸಮಾನವಾಗಿರಬೇಕು. ಇದು ನಮ್ಮ ಭರವಸೆ. ಅದನ್ನು ಜಾರಿಗೆ ತರುತ್ತೇವೆ’ ಎಂದು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.