ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ): ಜ್ಞಾನವೃದ್ಧಿಗಾಗಿ ಗ್ರಂಥಾಲಯ ಅಗತ್ಯವಾಗಿದ್ದು, ದೇಶಕ್ಕೆ ಮಾದರಿಯಾಗಿರುವ ಉಡುಪಿ ಗ್ರಂಥಾಲಯದ ಸೌಲಭ್ಯವನ್ನು ಉಡುಪಿಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ದುಬಾರಿ ಶುಲ್ಕ ನೀಡಿ, ದೂರದ ಊರುಗಳಲ್ಲಿ ಐಎಎಸ್, ಕೆಎಎಸ್ ಪಡೆಯುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಇಲ್ಲಿಗೆ ಕರೆಸಿ ಕೋಚಿಂಗ್ ಶಿಬಿರಗಳನ್ನು ಆಯೋಜಿಸಬೇಕು ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ. ರಘುಪತಿ ಭಟ್ ಸೂಚಿಸಿದರು.ಅವರು ಇಂದು ಅಜ್ಜರಕಾಡು ವಿದ್ಯಾ ವಾಚಸ್ಪತಿ ಡಾ| ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ನಗರ ಕೇಂದ್ರ ಗ್ರಂಥಾಲಯ ಉಡುಪಿ ಇವರ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಡಿಜಿಟಲ್ ಗ್ರಂಥಾಲಯ ಕಾರ್ಯಾಗಾರ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಹೆಚ್ಚು ಓದುವ ಹವ್ಯಾಸ ಮನುಷ್ಯನ ವ್ಯಕ್ತಿತ್ವವನ್ನು ಪ್ರಬುದ್ಧವಾಗಿಸುತ್ತದೆ. ವಿದ್ಯಾರ್ಥಿಗಳು ಗ್ರಂಥಾಲಯದ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ಉನ್ನತ ಸಾಧನೆಗಳನ್ನು ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯೆ ರಶ್ಮಿ ಚಿತ್ತರಂಜನ್ ದಾಸ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಡಿ. ಶೆಟ್ಟಿ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಉಪಾಧ್ಯಕ್ಷೆ ವಸಂತಿ ಶೆಟ್ಟಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಶೆಟ್ಟಿ, ಪ್ರಾಧ್ಯಾಪಕಿ ಡಾ| ನಿಕೇತನ, ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಉಪಸ್ಥಿತರಿದ್ದರು. ಎಂಐಟಿ ಸೆಂಟ್ರಲ್ ಲೈಬ್ರರಿ ಚೀಫ್ ಲೈಬ್ರೇರಿಯನ್ ಡಾ| ರೇಖಾ ಡಿ. ಪೈ ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳ ಮನೋಸ್ಥೈರ್ಯ ಹೆಚ್ಚಿಸುವಲ್ಲಿ ಗ್ರಂಥಾಲಯಗಳ ಪಾತ್ರ ವಿಷಯದಲ್ಲಿ ಮನೋರೋಗ ತಜ್ಞ ಡಾ| ಪಿ. ವಿ. ಭಂಡಾರಿ ಉಪನ್ಯಾಸ ನೀಡಿದರು. ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ. ಐ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ದರ್ಜೆ ಸಹಾಯಕಿ ಪ್ರೇಮ ನಿರೂಪಿಸಿ, ಗ್ರಂಥಪಾಲಕಿ ರಂಜಿತಾ ಸಿ. ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.