ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ): ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಉಡುಪಿ ನಗರಸಭೆ, ನೆಹರು ಯುವ ಕೇಂದ್ರ, ಲಯನ್ಸ್ ಕ್ಲಬ್ ಮಣಿಪಾಲ್, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಎಸ್.ಐ.ಟಿ.ಎ.ಆರ್.ಎ ಸಂಸ್ಥೆ ದಾವಣಗೆರೆ ಇವರ ಸಹಯೋಗದೊಂದಿಗೆ ನೆಲ ಮಟ್ಟದ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬುಧವಾರ ಕರಂಬಳ್ಳಿ ಹಾಗೂ ದೊಡ್ಡಣಗುಡ್ಡೆ ಪ್ರದೇಶದ ನೆಕ್ಕೆರೆ ಕೆರೆಗಳನ್ನು ಹಾಗೂ ಇಂದು ಮಣಪಳ್ಳ ಕೆರೆಯನ್ನು ಸ್ವಚ್ಛಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯರಾದ ಗಿರಿಧರ್ ಭಟ್, ಪ್ರಭಾಕರ ಪೂಜಾರಿ, ಕಲ್ಪನಾ ಸುಧಾಮ, ನಗರಸಭೆಯ ಪರಿಸರ ಅಭಿಯಂತರರಾದ ಸ್ನೇಹಾ, ಹಿರಿಯ ಆರೋಗ್ಯ ನಿರೀಕ್ಷಕ ಕರುಣಾಕರ್, ಜಿಲ್ಲಾ ಯುವಜನ ಅಧಿಕಾರಿ, ವಿಲ್ಫ್ರೆಡ್ ಡಿ ಸೋಜಾ, ನಗರಸಭೆಯ ಸ್ವಚ್ಛತಾ ರಾಯಭಾರಿ ಜೋಸೆಫ್ ರೆಬೆಲ್ಲೋ, ಪೂರ್ಣಪ್ರಜ್ಞಾ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕರು, ನಗರಸಭೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.