ಮಲಪ್ಪುರಂ (ವಿಶ್ವ ಕನ್ನಡಿಗ ನ್ಯೂಸ್) : ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿದೆ. ವತ್ತಥಣಿ ನಿವಾಸಿ ರಶೀದ್ ಎಂಬವರ ಪುತ್ರ ಮೊಹಮ್ಮದ್ ರಿಜ್ವಾನ್ ನಾಯಿ ಕಚ್ಚಿಸಿಕೊಂಡವರು. ಗಂಭೀರವಾಗಿ ಗಾಯಗೊಂಡ ಮಗುವನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 6:30ಕ್ಕೆ ಮಲಪ್ಪುರಂನ ತನೂರ್ ತಾನಲೂರಿನಲ್ಲಿ ಈ ಘಟನೆ ನಡೆದಿದೆ. ವೈದ್ಯರ ಪ್ರಕಾರ ಮಗುವಿನ ದೇಹದ ಮೇಲೆ ಸುಮಾರು 40 ಗಾಯಗಳಿವೆ. ಮನೆ ಸಮೀಪದ ಬೈಪಾಸ್ ರಸ್ತೆಗೆ ಇಳಿದ ಮಗುವಿನ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿದ್ದು, ಸುಮಾರು ಆರು ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ನಡೆಸಿವೆ ಎಂದು ವರದಿಯಾಗಿದೆ.
ತೀರಾ ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ಮೊದಲಿಗೆ ತಿರೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ನಂತರ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಸದ್ಯ ಮಗು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.