(ವಿಶ್ವ ಕನ್ನಡಿಗ ನ್ಯೂಸ್) : ಜನಪ್ರಿಯ ನಟಿ ಐಂದ್ರಿಲಾ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು. ಚಿಕ್ಕ ವಯಸ್ಸಿನಲ್ಲಿ ಅವರ ಸಾವು ಆಘಾತವನ್ನುಂಟು ಮಾಡಿದೆ. ಪಶ್ಚಿಮ ಬಂಗಾಳದವರಾದ ಐಂದ್ರಿಲಾ ಶರ್ಮಾ ಬಂಗಾಳಿಯ ಜನಪ್ರಿಯ ನಟಿ. ಅವರು ಕೆಲವು ಬಾರಿ ಎದೆ ನೋವಿನಿಂದ ಬಳಲುತ್ತಿದ್ದರು ಮತ್ತು ಅದರಿಂದ ಚೇತರಿಸಿಕೊಂಡಿದ್ದರು.
ಅವರಿಗೆ ನಿನ್ನೆ ರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿತು. ನಂತರ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಅವರು ಕೊನೆಯುಸಿರೆಳಿದಿದ್ದಾರೆ. 24 ವರ್ಷದ ಐಂದ್ರಿಲಾ ಅವರ ಸಾವು ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಐಂದ್ರಿಲಾ ಶರ್ಮಾ ಅವರ ನಿಧನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.