ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) ; ನಗರದ ಬಾಡಿಗೆ ಮನೆಯೊಂದರಲ್ಲಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬವರ ಪತ್ನಿಯ ಮೃತದೇಹ ಗೋಣಿ ಚೀಲದೊಳಗೆ ಪತ್ತೆಯಾಗಿದೆ. ಕಳೆದ ಆರು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ವಾಸವಾಗಿದ್ದ ಇಮ್ರಾನ್, ಎರಡು ದಿನಗಳ ಹಿಂದೆ ಊರಿಗೆ ತೆರಳುವುದಾಗಿ ಹೊಟೇಲ್ನಲ್ಲಿ ಹೇಳಿ ಹೋಗಿದ್ದ ಎಂದು ಹೇಳಲಾಗುತ್ತಿದೆ.
ಕೆಲ ದಿನಗಳ ಹಿಂದೆ ಆ ಪರಿಸರದಲ್ಲಿ ಕಿರುಚಿದ ಶಬ್ದ ಕೇಳಿದ್ದ ಸ್ಥಳೀಯರು, ಇಮ್ರಾನ್ ಪತ್ನಿ ಇಲ್ಲದೆ ಒಬ್ಬನೇ ಊರಿಗೆ ಹೋಗಿರವುದರಿಂದ ಸಂಶಯ ಮೂಡಿ ಆತ ಕೆಲಸ ಮಾಡುತ್ತಿದ್ದ ಹೊಟೇಲ್ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಮನೆಗೆ ಬಂದು ರೂಂ ಬಾಗಿಲು ಒಡೆದು ನೋಡಿದಾಗ ಗೋಣಿಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇಮ್ರಾನ್ ಪತ್ನಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ಮೃತದೇಹ ತುಂಬಿಸಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.