ರಿಯಾದ್ (ವಿಶ್ವ ಕನ್ನಡಿಗ ನ್ಯೂಸ್) : ಫಿಫಾ ವಿಶ್ವಕಪ್ ಗುಂಪಿನ ಪಂದ್ಯದಲ್ಲಿ ಅರ್ಜೆಂಟೀನಾದ ಸೋಲಿನ ಬಗ್ಗೆ ಸಂತಸ ವ್ಯಕ್ತಪಡಿಸಲು ಸೌದಿ ಅರೇಬಿಯಾದ ದೊರೆ ಸಲ್ಮಾನ್ ಸಾರ್ವಜನಿಕ ರಜೆ ಘೋಷಿಸಿದ್ದಾರೆ. ರಾಷ್ಟ್ರೀಯ ತಂಡದ ವಿಜಯವನ್ನು ರಜಾದಿನವಾಗಿ ಆಚರಿಸಲು ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಮಾಡಿದ ಶಿಫಾರಸನ್ನು ರಾಜ ಸಲ್ಮಾನ್ ಒಪ್ಪಿಕೊಂಡರು.
ಸಾರ್ವಜನಿಕ ಮತ್ತು ಖಾಸಗಿ ವಲಯದ ಉದ್ಯೋಗಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ವಲಯಗಳಿಗೆ ರಜೆ ಅನ್ವಯಿಸುತ್ತದೆ. ಪಂದ್ಯವನ್ನು ವೀಕ್ಷಿಸಲು ಸರ್ಕಾರಿ ನೌಕರರಿಗೆ ಇಂದು ಮಧ್ಯಾಹ್ನ 12 ಗಂಟೆಯಿಂದ ರಜೆ ನೀಡಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.