ದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ವಶಪಡಿಸಿಕೊಳ್ಳುವುದು ಗುರಿ ಎಂಬ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರದ ಯಾವುದೇ ಸೂಚನೆಗಳನ್ನು ಪಾಲಿಸುತ್ತೇವೆ ಎಂದು ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಯಾವುದೇ ಕ್ರಮ ಕೈಗೊಳ್ಳಲು ಸಿದ್ಧವಿದ್ದು, ಆದೇಶಕ್ಕಾಗಿ ಕಾಯುತ್ತಿರುವುದಾಗಿ ಸೇನೆ ತಿಳಿಸಿದೆ.
ಶ್ರೀನಗರದಲ್ಲಿ ನಡೆದ ಸೇನೆಯ 76ನೇ ‘ಶೌರ್ಯ ದಿವಸ್’ ಆಚರಣೆಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್ ಅವರು ಪಾಕ್ ಆಕ್ರಮಿತ ಕಾಶ್ಮೀರದ ಕುರಿತು ಹೇಳಿಕೆ ನೀಡಿದ್ದಾರೆ. ”ಭಾರತೀಯ ಸೇನೆಗೆ ಸಂಬಂಧಪಟ್ಟಂತೆ ಕೇಂದ್ರ ಸರಕಾರ ನೀಡುವ ಯಾವುದೇ ಆದೇಶವನ್ನು ಜಾರಿಗೊಳಿಸಲಾಗುವುದು. ಅಂತಹ ಆದೇಶಗಳನ್ನು ನೀಡಿದಾಗ ಅದನ್ನು ಕಾರ್ಯಗತಗೊಳಿಸಲು ನಾವು ಯಾವಾಗಲೂ ಸಿದ್ಧರಿದ್ದೇವೆ’ ಎಂದು ಉಪೇಂದ್ರ ದ್ವಿವೇದಿ ಹೇಳಿದರು.
ಕದನ ವಿರಾಮವನ್ನು ಉಲ್ಲಂಘಿಸಿದರೆ ತಕ್ಕ ಉತ್ತರ ನೀಡುವುದಾಗಿ ಉಪೇಂದ್ರ ದ್ವಿವೇದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಗಡಿಯಲ್ಲಿ ಶಾಂತಿ ಕಾಪಾಡುವುದು ಎರಡೂ ದೇಶಗಳ ಜವಾಬ್ದಾರಿಯಾಗಿದೆ. ಪಾಕಿಸ್ತಾನ ನಮ್ಮ ವಿರುದ್ಧ ಯಾವುದೇ ಕ್ರಮ ಕೈಗೊಂಡರೆ ಅದರ ಪರಿಣಾಮ ಎದುರಿಸಲು ಸಿದ್ಧವಾಗಬೇಕು ಎಂದು ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.