ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವರದಕ್ಷಿಣೆಗಾಗಿ ಪತಿಯೇ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ನಡೆದಿದೆ. ಭೂಸಂದ್ರ ನಿವಾಸಿ ಶೃತಿ (29) ಕೊಲೆಯಾದವರು.
ಮೂರು ತಿಂಗಳ ಹಿಂದೆ ಇವರ ಮದುವೆ ನಡೆದಿತ್ತು. ಅಂದಿನಿಂದಲೂ ಪತಿ ವರದಕ್ಷಿಣೆ ತಂದಿಲ್ಲ ಎಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದೇ ಕಾರಣವನ್ನು ಮುಂದಿಟ್ಟು ಕೊಂಡು ಕೃಷ್ಣಮೂರ್ತಿ ಆತನ ಪತ್ನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ ಎಂದು ಕೊಲೆಗೀಡಾದ ಶೃತಿಯ ಕುಟುಂಬಸ್ಥರು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.