ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಬಯಸಿ ಪುತ್ತೂರು ಕ್ಷೇತ್ರದಿಂದ13 ಮಂದಿ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ಎಸ್.ಮೊಹಮ್ಮದ್, ಜಿ.ಪಂ.ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೃಪಾ ಅಮರ್ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಕೆಡೆಂಜಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಬಿ.ರಾಜಾರಾಮ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ ಅರ್ಜಿ ಸಲ್ಲಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.