ಬೆಳಗಾವಿ (ವಿಶ್ವ ಕನ್ನಡಿಗ ನ್ಯೂಸ್) : ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿಬಿದ್ದು ನಾಲ್ವರು ಯುವತಿಯರ ಬಲಿಯಾಗಿರುವ ಘಟನೆ ಬೆಳಗಾವಿಯ ಕಿತವಾಡ ಫಾಲ್ಸ್ ನಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಯುವತಿಯರು ಸಾವನ್ನಪ್ಪಿದ್ದು, ಇನ್ನೋರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪ್ರವಾಸಕ್ಕಾಗಿ ಕಿತವಾಡಿ ಫಾಲ್ಸ್ ಗೆ ನಲವತ್ತು ಮಂದಿ ಯುವತಿಯರು ತೆರಳಿದ್ದರು. ಅವರಲ್ಲಿ ಮೃತಪಟ್ಟವರನ್ನು ಆಸೀಯಾ ಮುಜಾವರ್(17 ವರ್ಷ), ಕುದ್ಶೀಯಾ(20 ವರ್ಷ), ರುಕ್ಕಶಾರ್ ಭಿಸ್ತಿ(20 ವರ್ಷ), ತಸ್ಮಿಯಾ(20 ವರ್ಷ) ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಮೃತಪಟ್ಟ ಯುವತಿಯರ ಮೃತದೇಹವನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ನೀಡಲಾಗುವುದು ಎಂದು ಹೇಳಲಾಗಿದೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.