ಹೈದರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ತೆಲಂಗಾಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮರಿ ಶಶಿಧರ್ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಶಶಿಧರ್ ರೆಡ್ಡಿ ಪ್ರತಿಕ್ರಿಯಿಸಿ, ತೆಲಂಗಾಣದಲ್ಲಿ ಅಭಿವೃದ್ಧಿ ಕಾರ್ಯಗತಗೊಳಿಸಲು ಪ್ರಧಾನಿ ನರೇಂದ್ರ ಮೋದಿಯಿಂದ ಮಾತ್ರ ಸಾಧ್ಯ ಎಂದಿದ್ದಾರೆ.
ಪ್ರಧಾನಿ ಆಶಯದಂತೆ ತೆಲಂಗಾಣದಲ್ಲಿ ಬಿಜೆಪಿಯನ್ನು ಬಲಪಡಿಸಲಾಗುವುದು. ತೆಲಂಗಾಣ ವಿಭಜನೆ ಮತ್ತು ಸ್ವಾಧೀನದ ನಂತರ ಜನವಿರೋಧಿ ಚಟುವಟಿಕೆಗಳಿಗೆ ಮುಂದಾಗಿರುವ ತೆಲಂಗಾಣ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ ಕೆಲಸ ಮಾಡಲಿದೆ ಎಂದೂ ಅವರು ಹೇಳಿದ್ದಾರೆ.
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತೆಲಂಗಾಣ ಬಿಜೆಪಿ ಮುಖಂಡರಾದ ಕಿಶನ್ ರೆಡ್ಡಿ, ಬಂಡಿ ಸಂಜಯ್, ಡಿಕೆ ಅರುಣಾ ಮತ್ತು ಇಟಾಲ ರಾಜೇಂದರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.