ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ಹೊಂಡ ಗುಂಡಿ ಇರುವ ರಸ್ತೆಯಲ್ಲಿ ಎದ್ದುಬಿದ್ದು ಬಂದ ಅಂಬುಲೆನ್ಸ್ ನಲ್ಲಿ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿದರು. ಇದು ನಡೆದಿದ್ದು ಕಳೆದ ಎರಡು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿರುವ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ. ಈ ರಸ್ತೆಯ ದುರಸ್ತಿಗೆ ಆಗ್ರಹಿಸಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ನೇತೃತ್ವದಲ್ಲಿ ಈ ರೀತಿಯಾಗಿ ವಿನೂತನ ಪ್ರತಿಭಟನೆ ನಡೆಯಿತು.
ಹೊಂಡಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ಗರ್ಭಿಣಿ ಸ್ತ್ರೀಯರನ್ನು ಕರೆದುಕೊಂಡು ಹೋದರೆ, ವಾಹನ ಬಿದ್ದು ರಸ್ತೆಯಲ್ಲೇ ಹೆರಿಗೆ ಆಗುತ್ತದೆ ಎಂಬುವುದನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಅಣಕು ಪ್ರದರ್ಶನದ ಮೂಲಕ ತೋರಿಸಲಾಯಿತು. ಅಣಕು ಪ್ರದರ್ಶನದಲ್ಲಿ ರಾಜು ಮತ್ತು ಹರೀಶ್ ನಟಿಸಿದರು. ಪ್ರತಿಭಟನೆಗೆ ರೈಲು ನಿಲ್ದಾಣದ ಆಟೋ ಚಾಲಕರು ಟ್ಯಾಕ್ಸಿಮನ್ ಅಸೋಸಿಯೇಷನ್ ಬೆಂಬಲ ನೀಡಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.