ಕಾರ್ಕಳ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ಅಸಂಖ್ಯಾತ ಹಿಂದೂ ಕಾರ್ಯಕರ್ತರ ಹತ್ಯೆ, ಮನೆಗೆ ನುಗ್ಗಿ ತಲವಾರು ತೋರಿಸಿ ದನಗಳ್ಳತನ, ಲವ್ ಜಿಹಾದ್, ಭಯೋತ್ಪಾದನೆ ಮುಂತಾದ ಕೃತ್ಯಗಳಲ್ಲಿ ತೊಡಗಿಕೊಂಡಿರುವ ಮುಸಲ್ಮಾನರಿಗೆ ಇತಿಹಾಸ ಪ್ರಸಿದ್ಧ ಸೂಡ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡದಂತೆ ಹಿಂದೂ ಜಾಗರಣ ವೇದಿಕೆಯು ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಮಾಡಿದೆ.
ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ವಿಚಾರದಲ್ಲಿ ಈಗಾಗಲೇ ರಾಷ್ಟ್ರೀಯ ತನಿಖಾ ದಳವು ಮುಸ್ಲಿಂ ಧರ್ಮದ ಯುವಕರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟರೆ ಭಯೋತ್ಪಾದನೆಗೆ ಹಾಗೂ ರಾಷ್ಟ್ರ ವಿರೋಧಿ ಕೃತ್ಯಗಳಿಗೆ ನಾವೇ ಬೆಂಬಲಿಸಿದಂತಾಗುತ್ತದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.