ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಅನ್ಯಧರ್ಮದ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೂವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮುತ್ತು, ಪ್ರಕಾಶ್ ಮತ್ತು ರಾಕೇಶ್ ಬಂಧಿತ ಆರೋಪಿಗಳು.
ನ.24ರಂದು ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಕಳದ ಖಾಸಗಿ ಕಾಲೇಜು ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ ಎಂಬವರ ಮೇಲೆ ಬಸ್ಸಿನಲ್ಲಿ ಹಲ್ಲೆ ನಡೆದಿತ್ತು. ಬಸ್ಸಿನೊಳಗೆ ನುಗ್ಗಿದ ತಂಡ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದ್ದಲ್ಲದೆ ಬಸ್ಸಿನಿಂದ ಕೆಳಗೆ ಇಳಿಸಿ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಕೆಯೊಡ್ಡಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕದ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.