ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) ; ಸದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪನ್ನಪಾಳ್ಯದಲ್ಲಿ ವಿವಾಹಿತೆ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಖತೀಜಾ ಕುಬ್ರ(30)ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ.
ಗಂಡ ಮಹಬೂಬ್ ಸೇರಿ ಅವರ ಮನೆಯವರೇ ಈಕೆಯನ್ನು ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಈಕೆಯ ಗಂಡ ಯಾವಾಗಲೂ ಜಗಳಾವಾಡುತ್ತಿದ್ದ, ಪ್ರತಿನಿತ್ಯ ಹಲ್ಲೆ ಮಾಡುತ್ತಿದ್ದ. ಆತನಿಗೆ ಇನ್ನೋರ್ವ ಮಹಿಳೆಯ ಜೊತೆ ಅಕ್ರಮ ಸಂಬಂಧ ಇದೆ. ಪತಿಯೇ ಕೊಲೆ ಮಾಡಿ ನೇಣು ಹಾಕಿದ್ದಾನೆಂದು ಖತೀಜಾ ಕುಟುಂಬ ಆರೋಪಿಸಿದೆ. ಖತೀಜಾ ಅವರ ಪತಿ, ಮಾವ ಮತ್ತು ನಾದಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.