ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ದೇವಾಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ತಡೆವೊಡ್ಡಲು ಬಂದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಸ್ಥಳೀಯರು ಓಡಿಸಿದ ಘಟನೆ ಉದ್ಯಾವರ ಕುತ್ಪಾಡಿಯ ಮಾಂಗೋಡು ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿ ನಿನ್ನೆ ನಡೆದಿದೆ.
ಇಲ್ಲಿ ಪ್ರತಿ ವರ್ಷವೂ ಜಾತ್ರೆಯಲ್ಲಿ ಯಾವುದೇ ಭೇದಭಾವವಿಲ್ಲದೆ ವ್ಯಾಪಾರ ವಹಿವಾಟು ನಡೆಯುತ್ತದೆ. ಆದರೆ ನಿನ್ನೆ ಸ್ಥಳೀಯ ಹಿಂದೂ ಸಂಘಟನೆಯ ಮುಖಂಡರು ತನ್ನ ನಾಲ್ಕು ಬೆಂಬಲಿಗರೊಂದಿಗೆ ಬಂದು ಅನ್ಯಧರ್ಮಿಯರಿಗೆ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಎಚ್ಚರಿಕೆ ನೀಡಿದ್ದರು. ತಕ್ಷಣ ಮಾಹಿತಿ ತಿಳಿದ ಸ್ಥಳೀಯ ಯುವಕರೆಲ್ಲ ಸೇರಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡಿದ್ದು ಮಾತ್ರವಲ್ಲದೆ, ಸ್ಥಳದಿಂದ ಓಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.