ಫುಜೈರಾ (ವಿಶ್ವ ಕನ್ನಡಿಗ ನ್ಯೂಸ್) : ಉದ್ಯೋಗಾಕಾಂಕ್ಷಿಗಳನ್ನು ಬಲೆಗೆ ಬೀಳಿಸುವ ಉದ್ದೇಶದಿಂದ ನಕಲಿ ಜಾಹೀರಾತುಗಳ ವಿರುದ್ಧ ಫುಜೈರಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಫುಜೈರಾ ಪೊಲೀಸ್ ಹೆಸರಿನಲ್ಲಿ ನಕಲಿ ಜಾಹೀರಾತು ಗಮನಕ್ಕೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಜಾಹೀರಾತಿಗೆ ಜೋತು ಬಿದ್ದವರಿಂದ ಹಣ ವಸೂಲಿ ಮಾಡುವುದು ಈ ಹಗರಣದ ಉದ್ದೇಶ.
ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ, ಫುಜೈರಾ ಪೊಲೀಸರ ಚಿತ್ರವಿರುವ ನಕಲಿ ಉದ್ಯೋಗ ಜಾಹೀರಾತು ಸಾಮಾಜಿಕ ಮಾಧ್ಯಮದಲ್ಲಿ ಹರಡಿತು. ಇಂತಹ ಜಾಹೀರಾತುಗಳಿಗೆ ಮರುಳಾಗಬೇಡಿ ಎಂದು ಪೊಲೀಸರು ಎಚ್ಚರಿಕೆ ನೀಡಿದರು. ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳ ಹೆಸರಿನಲ್ಲಿ ಪ್ರಕಟವಾಗಿರುವ ಉದ್ಯೋಗ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಖಾಲಿ ಇರುವ ಹುದ್ದೆಗಳು ಚಾಲ್ತಿಯಲ್ಲಿವೆಯೇ ಎಂಬುದನ್ನು ಪರಿಶೀಲಿಸಿ ಮನವರಿಕೆ ಮಾಡಿಕೊಳ್ಳಬೇಕು ಎಂದು ಪೊಲೀಸರು ಸೂಚನೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.