ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ನಗರಸಭೆ ಸದಸ್ಯ, ವಕೀಲರೂ ಆಗಿರುವ ಎಂ.ಮುನಿರಾಜು ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನುಮೋದನೆಯ ಮೇರೆಗೆ ಹಿರಿಯ ವಕೀಲ, ಕೆಪಿಸಿಸಿ ಕಾನೂನು, ಮಾನವಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಆದೇಶ ಹೊರಡಿಸಿದ್ದಾರೆ.
ಪಕ್ಷದ ಮುಖಂಡರ ಮಾರ್ಗದರ್ಶನ ಹಾಗು ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿ ಆದೇಶ ಪತ್ರ ನೀಡಿದ್ದಾರೆ.
ಕ್ಷೇತ್ರದ ಶಾಸಕ ವಿ.ಮುನಿಯಪ್ಪ ಅವರು ನೇಮಕಾತಿ ಆದೇಶಪತ್ರವನ್ನು ನೀಡಿ ಜಿಲ್ಲೆಯ ಪಕ್ಷದ ಶಾಸಕರು-ಮಾಜಿ ಶಾಸಕರನ್ನು ಹಾಗೂ ನಾಯಕರು-ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಬೇಕೆಂದು ಸಲಹೆ ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಆನಂದ್, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.