ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಲವ್ ಜಿಹಾದ್ ಆರೋಪಿಸಿ ಭಜರಂಗದಳದ ಕಾರ್ಯಕರ್ತರು ಜ್ಯುವೆಲ್ಲರಿ ಶಾಪ್ ಒಳಗೆ ನುಗ್ಗಿ ಥಳಿಸಿದ್ದು, ಪೊಲೀಸರ ಎದುರೇ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಕಂಕನಾಡಿ ಬಳಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ಕೆಲಸಕ್ಕಿದ್ದ ಶೃಂಗೇರಿ ಮೂಲದ ಯುವತಿ ಮತ್ತು ಮಂಗಳೂರಿನ ಮುಸ್ಲಿಂ ಯುವಕ ಜೊತೆಯಾಗಿ ಕೆಲಸ ಮಾಡುತ್ತಿದ್ದರು, ಇವರಿಬ್ಬರು ಬೈಕ್ ನಲ್ಲಿ ಸುತ್ತಾಡಿದ್ದನ್ನ ಕಂಡಿದ್ದ ಸಂಘಟನೆಯ ಯುವಕರು ಈ ಮಾಹಿತಿ ಯುವತಿಯ ಪೋಷಕರ ಗಮನಕ್ಕೆ ತಂದು ಇಂದು ಭಜರಂಗದಳದ ಕಾರ್ಯಕರ್ತರು ಹಾಗೂ ಪೊಲೀಸರ ಜೊತೆಗೆ ಪೋಷಕರು ಜ್ಯುವೆಲ್ಲರಿ ಶಾಪ್ ಗೆ ಬಂದಿದ್ದಾರೆ.
ಈ ವೇಳೆ ಪರಿಸ್ಥಿತಿ ಕೈ ಮೀರಿದ್ದು, ಪೊಲೀಸರ ಎದುರೇ ಭಜರಂಗದಳದ ಕಾರ್ಯಕರ್ತರು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಯುವತಿ ಪೋಷಕರೂ ಆಕೆಗೆ ಥಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಕದ್ರಿ ಪೊಲೀಸರು ಯುವತಿ, ಯುವಕ ಮತ್ತು ಪೋಷಕರನ್ನ ಠಾಣೆಗೆ ಕರೆ ತಂದು ವಿಚಾರಣೆ ನಡೆಸ್ತಿದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.