ಬ್ರಹ್ಮಾವರ (ವಿಶ್ವ ಕನ್ನಡಿಗ ನ್ಯೂಸ್) : ಬ್ರಹ್ಮಾವರ ತಾಲೂಕು ಮಾಬುಕಳ ಹಪ್ಪಳಬೆಟ್ಟು ಎಂಬಲ್ಲಿ ಮನೆಯಿಂದ ಹೊರಗೆ ಹೋದ ಯುವತಿ ವಾಪಾಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ. ಸಾರಾ ಡೇಸಾ ನಾಪತ್ತೆಯಾದ ಯುವತಿ ಎಂದು ತಿಳಿದುಬಂದಿದೆ. ನವೆಂಬರ್ 17 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಇವರ ಚಹರೆ ಇಂತಿದೆ ; 5 ಅಡಿ 1 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.