ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಗುಜರಾತ್ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಗುಜರಾತ್ ಜನತೆಯ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದರು. ಗುಜರಾತಿನಲ್ಲಿ ಕಾಂಗ್ರೆಸ್ನ ತಪ್ಪುಗಳನ್ನು ತಿದ್ದಿಕೊಂಡು ಶ್ರಮಿಸಿ ಮತ್ತೆ ಬರುತ್ತೇವೆ ಎಂದು ಪ್ರತಿಕ್ರಿಯಿಸಿದರು.
ದೇಶದ ಆದರ್ಶಗಳು ಮತ್ತು ಜನರ ಹಕ್ಕುಗಳಿಗಾಗಿ ಹೋರಾಡುತ್ತೇನೆ. ಹಿಮಾಚಲದಲ್ಲಿ ಭರ್ಜರಿ ಗೆಲುವು ಸಾಧಿಸಿದ ಜನತೆಗೆ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದ್ದಾರೆ. ಪ್ರಾಮಾಣಿಕವಾಗಿ ದುಡಿಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಅಭಿನಂದಿಸಿದರು. ಚುನಾವಣೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.