ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಾರ್ಯಕ್ರಮವೊಂದರಲ್ಲಿ ಬುರ್ಖಾ ಧರಿಸಿ ನೃತ್ಯ ಮಾಡಿದ ಆರೋಪದ ಮೇಲೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಈ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಅಧಿಕಾರಿಗಳು ತನಿಖೆ ನಡೆಸಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ.
ಕಾಲೇಜು ಅಧಿಕಾರಿಗಳು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ನಾಲ್ವರು ವಿದ್ಯಾರ್ಥಿಗಳು ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ಈವೆಂಟ್ ಗೆ ಅನುಮತಿ ಇಲ್ಲ. ಇದರಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಟ್ಟು ಅಮಾನತುಗೊಳಿಸಲಾಗಿದೆ. ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಚಟುವಟಿಕೆಗಳನ್ನು ಕಾಲೇಜು ಬೆಂಬಲಿಸುವುದಿಲ್ಲ ಮತ್ತು ಅವರನ್ನು ಕ್ಷಮಿಸುವುದಿಲ್ಲ ಎಂದು ಕಾಲೇಜು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.