ಹೊಸದಿಲ್ಲಿ (ವಿಶ್ವ ಕನ್ನಡಿಗ ನ್ಯೂಸ್) : ಭಾರತೀಯ ಕರೆನ್ಸಿಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಿತ್ರ ತೆಗೆಯಲಾಗುವುದು ಎಂಬ ವರದಿಯನ್ನು ಕೇಂದ್ರ ಹಣಕಾಸು ಸಚಿವಾಲಯ ತಳ್ಳಿಹಾಕಿದೆ. ಗಾಂಧೀಜಿ ಅವರ ಚಿತ್ರವನ್ನು ಕರೆನ್ಸಿಯಿಂದ ತೆಗೆದುಹಾಕುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ.
ಕರೆನ್ಸಿಯಲ್ಲಿ ನೇತಾಜ್ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಹಿಂದೂ ದೇವರುಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಸೇರಿಸಲು ಹಲವು ಪ್ರಸ್ತಾವನೆಗಳು ಬಂದಿವೆ. ಆದರೆ ಇಂದು ಹಣಕಾಸು ಸಚಿವಾಲಯವು ಲೋಕಸಭೆಯಲ್ಲಿ ಪ್ರಸ್ತುತ ಕರೆನ್ಸಿಯನ್ನು ಬದಲಾಯಿಸುವ ಉದ್ದೇಶವನ್ನು ಸರ್ಕಾರ ಹೊಂದಿಲ್ಲ ಎಂದು ಹೇಳಿದೆ. ಈ ಬಗ್ಗೆ ಆರ್ಬಿಐ ಈಗಾಗಲೇ ಸ್ಪಷ್ಟನೆ ನೀಡಿದೆ ಎಂದು ಹಣಕಾಸು ಸಚಿವಾಲಯ ಸಂಸತ್ತಿನಲ್ಲಿ ತಿಳಿಸಿದೆ. ಸಂಸದ ಆ್ಯಂಟನಿ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಈ ವಿಷಯ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.