ಟೊರೊಂಟೊ (ವಿಶ್ವ ಕನ್ನಡಿಗ ನ್ಯೂಸ್) : ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ಮೂಲದ ಸಿಖ್ ಯುವಕನೋರ್ವ ಮೃತಪಟ್ಟಿದ್ದಾನೆ. ಡಿಸೆಂಬರ್ 3ರಂದು ಅಲ್ಬರ್ಟಾ ಪ್ರಾಂತ್ಯದಲ್ಲಿ ಹತ್ಯೆಗೀಡಾದವರನ್ನು 24 ವರ್ಷದ ಸನ್ರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಡಿಸೆಂಬರ್ 3 ರಂದು ಒಂಟಾರಿಯೊ ಪ್ರಾಂತ್ಯದಲ್ಲಿ 21 ವರ್ಷದ ಸಿಖ್ ಮಹಿಳೆ ಪವನ್ಪ್ರೀತ್ ಕೌರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಇದರ ನಂತರ ಮತ್ತೊಂದು ದಾಳಿ ನಡೆಯಿತು. ಕೆನಡಾದಲ್ಲಿ ಸಿಖ್ ಸಮುದಾಯದ ವಿರುದ್ಧ ನಡೆಯುತ್ತಿರುವ ಹಿಂಸಾಚಾರ ಕಳವಳಕಾರಿ ವಿಷಯವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.