ಶ್ರೀನಿವಾಸಪುರ( ವಿಶ್ವಕನ್ನಡಿಗ ನ್ಯೂಸ್ ): ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥ ಸುನಿಲ್ ಎಸ್.ಹೊಸಮನಿ ಭೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವಿವಿಧ ಘಟಕಗಳು ಹಾಗೂ ಒಳ ರೋಗಿಗಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು , ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸಬೇಕು.
ರೋಗಿಗಳಿಗೆ ಚೆನ್ನಾಗಿ ಶುಚಿಗೊಳಿಸಿದ ಬಟ್ಟೆಗಳನ್ನು ನೀಡಬೇಕು ಎಂದು ಹೇಳಿದರು. ಆಸ್ಪತ್ರೆ ಶುಚಿತ್ವ , ನಿರ್ವಹಣೆ ಮತ್ತು ಸಿಬ್ಬಂದಿಯ ವೈದ್ಯಕೀಯ ಸೇವೆ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು , ಆಸ್ಪತ್ರೆ ಮುಂದೆ ವಾಹನಗಳ ನಿಲುಗಡೆ ಮಾಡುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ವಾಹನಗಳನ್ನು ವ್ಯವಸ್ಥಿತವಾಗಿ ನಿಲುಗಡೆ ಮಾಡಲು ಪೊಲೀಸ್ ಇಲಾಖೆ ನೆರವು ಪಡೆಯುಂತೆ ಸೂಚಿಸಿದರು.
ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ . ಕುಡಿಯುವ ನೀರಿನ ಸಮಸ್ಯೆ ಇದೆ , ಐಸಿಯು ಘಟಕ ಇದೆಯಾದರೂ , ತಜ್ಞ ವೈದ್ಯರಿಲ್ಲ ಎಂದು ವೈದ್ಯರು ನ್ಯಾಯಾಧೀಶರಿಗೆ ತಿಳಿಸಿದರು. ಅದಕ್ಕೆ ಸ್ಪಂದಿಸಿದ ನ್ಯಾಯಾಧೀಶರು ಸಮಸ್ಯೆಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಆಸ್ಪತ್ರೆ ಆಡಳಿತಾಧಿಕಾರಿ ಡಾ . ಜಿ.ಎಸ್.ಶ್ರೀನಿವಾಸ್ , ಡಾ . ಉಮಾಶಂಕರ್ , ಡಾ . ದಿವಾಕರ್ , ಡಾ . ಕಮಲಮ್ಮ , ಡಾ . ನಿರಂಜನ್ , ಸಿಬ್ಬಂದಿ ಪ್ರಕಾಶ್ , ಲೀಡಿಯಾ , ಔಷಧಿಕಾರ ಮೊಹಮ್ಮದ್ ಅಲಿ , ಸೈಯದ್ , ಉಷಾ , ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.