ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) : ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಸಿಂಗರವರ ಪುತ್ರಿ ಪವಿತ್ರ (22) ಎಂದು ತಿಳಿದುಬಂದಿದೆ.
ಎರಡು ದಿನದ ಹಿಂದೆ ಜ್ವರಕ್ಕೆ ತುತ್ತಾದ ಪವಿತ್ರರನ್ನು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಉಲ್ಬಣಗೊಂಡ ಕಾರಣ ಅವರನ್ನು ಅಲ್ಲಿಂದ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.