ಮೈಸೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಸೇರುವಂತೆ ನನಗೆ ವಿಜಯೇಂದ್ರ, ಯಡಿಯೂರಪ್ಪ ಹಾಗೂ ಶ್ರೀನಿವಾಸಪ್ರಸಾದ್ ಹಣದ ಆಮಿಷ ಒಡ್ಡಿದ್ದರು ಎಂದು ಆರೋಪ ಮಾಡಿದ್ದಾರೆ.
ಹಣ ನೀಡಲು ಯಡಿಯೂರಪ್ಪನವರ ಮಗ ವಿಜಯೇಂದ್ರ ಬಂದಾಗ ಯಡಿಯೂರಪ್ಪ ಹಾಗೂ ಸಂಸದ ಶ್ರೀನಿವಾಸ್ ಪ್ರಸಾದ್ ಇಬ್ಬರೂ ಇದ್ದರು. ಈ ಘಟನೆ ಬೆಂಗಳೂರಿನ ವಿಜಯೇಂದ್ರ ಅವರ ಅಪಾರ್ಟ್ಮೆಂಟ್ನಲ್ಲಿ ನಡೆದಿತ್ತು. ಈ ವಿಚಾರ ನನ್ನ ಬಾಂಬೆ ಡೇಸ್ ಪುಸ್ತಕದ ಮೊದಲ ಅಧ್ಯಾಯದಲ್ಲಿ ಇದೆ ಎಂದು ವಿಶ್ವನಾಥ್ ಹೇಳಿದ್ದಾರೆ.
ಬಿಜೆಪಿ ಸೇರಿದ ಮೇಲೆ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ನಾನು ಚುನಾವಣೆಯಲ್ಲಿ ಸೋತ ಮೇಲೆ ಯಡಿಯೂರಪ್ಪ ನನ್ನನ್ನು ಎಂಎಲ್ಸಿ ಮಾಡಲು ಹಿಂದೇಟು ಹಾಕಿದ್ದರು. ಆದರೆ ಆರೆಸ್ಸೆಸ್ನ ನನ್ನ ಹೆಸರನ್ನು ಎಂಎಲ್ಸಿ ಪಟ್ಟಿಯಲ್ಲಿ ಸೇರಿಸಿದ್ದರು. ಹೀಗಾಗಿ ಎಂಎಲ್ಸಿ ಮಾಡಿದ್ದು ಯಡಿಯೂರಪ್ಪ ಅಲ್ಲ. ನಾನು ಸೋತ ಸಂದರ್ಭದಲ್ಲಿ ಯಾವೊಬ್ಬ ಬಿಜೆಪಿ ನಾಯಕರೂ ನನ್ನ ನೆರವಿಗೆ ಬರಲಿಲ್ಲ ಎಂದು ಅವರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.