ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ತಾಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಕೆ.ಮುತ್ತುಕದಹಳ್ಳಿ ದೇವರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗುರುವಾರ ನಡೆದ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದೇವರಾಜ್ ಒಬ್ಬರು ಮಾತ್ರವೇ ನಾಮ ಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾಗಿ ಬಂದಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ಅವರು ಅಧಿಕೃತವಾಗಿ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಕೆಎಂಎಫ್ ನಿರ್ದೇಶಕರಾದ ಶ್ರೀನಿವಾಸ್ ರಾಮಯ್ಯ, ಮಾಜಿ ಅಧ್ಯಕ್ಷರಾದ ಪಿಳ್ಳಆಂಜಿನಪ್ಪ, ನಂಜಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಧು ರಾಮಯ್ಯ, ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್, ಮುಖಂಡರಾದ ದೇವರಾಜ್,ಮಧುರಾಮಯ್ಯ, ವೈ.ಹುಣಸೇನಹಳ್ಳಿ ಎಸ್ಎಫ್ಸಿಎಸ್ ಬ್ಯಾಂಕಿನ ಅಧ್ಯಕ್ಷ ಶೀಗೆಹಳ್ಳಿ ಬಸವರಾಜ್,ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಮಮತಾ ಮತ್ತಿತರರು ಉಪಸ್ಥಿತರಿದ್ದರು.
ವರದಿ; ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.