ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್): ತಾಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗ, ಹಾಲು ಉತ್ಪಾದಕರ ಸಹಕಾರ ಸಂಘ, ರೇಷ್ಮೆ ಬೆಳೆಗಾರರ ಸಹಕಾರ ಸಂಘ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಕರುನಾಡ ಪುನೀತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಿರಿಯ ಮುಖಂಡ ಬಿ.ಬೈರೇಗೌಡ ಅವರು ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಪುನೀತೋತ್ಸವ ಕಾರ್ಯಕ್ರಮವನ್ನು ಚಾಲನೆ ನೀಡಿದರು.
ನಂತರ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು ಪುನೀತ್ ಉತ್ಸವದ ಅಂಗವಾಗಿ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಮತ್ತು ಗ್ರಾಮಸ್ಥರು ರಕ್ತದಾನ ಶಿಬಿರವನ್ನು ಆಯೋಜಿಸಿ ಸುಮಾರು 65 ಯುನಿಟ್ ರಕ್ತವನ್ನು ಸಂಗ್ರಹಿಸಿದರು.
ಕೊರೊನಾ ಎಂಬ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಕೈಲಾದಷ್ಟು ಸೇವೆ ಮಾಡುವ ಮೂಲಕ ಎಲ್ಲಾ ವರ್ಗಗಳ ಮನಗೆದ್ದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮ ನಡುವೆ ಇಲ್ಲ ಎಂದರೇ ನಂಬುವುದಕ್ಕೆ ಸಾಧ್ಯವಿಲ್ಲ ಅವರ ಹೆಸರು ಶಾಶ್ವತವಾಗಿ ಉಳಿಯಬೇಕು ಅವರ ಅಭಿಮಾನಿಗಳು ಮತ್ತು ಯುವಕರು ಸಮಾಜಸೇವಾ ಕಾರ್ಯಗಳ ಮೂಲಕ ಆದರ್ಶ ಸಮಾಜವನ್ನು ನಿರ್ಮಿಸಬೇಕೆಂದು ಗಣ್ಯರು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಕೃಷ್ಣಯ್ಯ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಮಳಮಾಚನಹಳ್ಳಿ ಎಸ್.ಎಫ್.ಸಿ.ಎಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಮುನೇಗೌಡ, ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್, ಮುಖಂಡರಾದ ಶಿವಮೂರ್ತಿ, ರವಿಗೌಡ, ಸುನಿಲ್ಗೌಡ, ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್, ಮಳಮಾಚನಹಳ್ಳಿ ಗ್ರಾಪಂ ಸದಸ್ಯ ಡಿ.ಬೈರೇಗೌಡ ಹಾಗೂ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.