ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಳೆದ ಎರಡು ವರ್ಷಗಳಿಂದ ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಮ್ಮ ಊರು ಬಾಗಲಕೋಟೆಗೆ ಹೋಗಿದ್ದ ಅವರು ಹೃದಯಾಘಾತಕ್ಕೆ ಒಳಗಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇವರು ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ಮೂಲತಃ ಬಾಗಲ ಕೋಟೆ ಜಿಲ್ಲೆಯವರಾದರೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಪೊಲೀಸ್ ಎನ್ನುವ ಹೆಸರು ಗಳಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.