ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) : ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅದೇ ಊರಿನ ಹನೀಫ್, ಪಣಕಜೆ ನಿವಾಸಿ ಕೆ.ಮೊಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶಾಲಾ ಬಸ್ಸು ಕೊಯ್ಯೂರಿನಿಂದ ಮಕ್ಕಳನ್ನು ಕರೆದುಕೊಂಡು ಬರುತಿದ್ದಾಗ ಮಲೆಬೆಟ್ಟು ದೇವಸ್ಥಾನದ ಬಳಿ ಎದುರಿನಿಂದ ಬಂದ ಗೂಡ್ಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ರಿಕ್ಷಾದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ರಿಕ್ಷಾದಲ್ಲಿದ್ದ ರಝಾಕ್ ಸಾವನ್ನಪ್ಪಿದ್ದಾರೆ. ಚಾಲಕ ಹನೀಫ್, ಪಣಕಜೆ ನಿವಾಸಿ ಕೆ.ಮೊಹಮ್ಮದ್ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.