ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್ ) : ಮಾಜಿ ಸಚಿವ ಜನಾರ್ಧನ ರೆಡ್ಡಿ ಬಿಜೆಪಿಗೆ ಗುಡ್ಬೈ ಹೇಳಿ “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ“ ಎಂಬ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಬಿಜೆಪಿ ತಮ್ಮನ್ನು ಕೆಲವು ವರ್ಷಗಳಿಂದ ನಡೆಸಿಕೊಂಡಿರುವುದಕ್ಕೆ ಬೇಸತ್ತು ಬಿಜೆಪಿಯಿಂದ ಹೊರಬಂದು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ವನ್ನು ಉದಯ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಈವರೆಗೆ ಬಿಜೆಪಿ ಪಕ್ಷದೊಂದಿಗೆ ಇದ್ದ ಎಲ್ಲಾ ನಂಟು ತೊರೆಯುವುದಾಗಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ಎರಡು ದಶಕದ ರಾಜಕೀಯ ಜೀವನದ ಆಗು-ಹೋಗುಗಳ ಬಗ್ಗೆ ವಿವರಿಸಿದ್ದಾರೆ. ಕರ್ನಾಟಕ ರಾಜ್ಯದ ಅಭಿವೃದ್ದಿಯೇ ನನ್ನ ಗುರಿಯಾಗಿದ್ದು, ಜನ ಮೆಚ್ಚುವ ರೀತಿಯಲ್ಲಿ ನನ್ನ ಪಕ್ಷ ಕೆಲಸ ಮಾಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.