ಸುರತ್ಕಲ್ (ವಿಶ್ವ ಕನ್ನಡಿಗ ನ್ಯೂಸ್) : ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಭರವಸೆ ನೀಡಿದ್ದಾರೆ.
ಜಲೀಲ್ ಅವರ ಮೃತದೇಹವನ್ನು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅವರ ಸ್ವಗೃಹಕ್ಕೆ ತೆಗೆದುಕೊಂಡು ಬಂದ ವೇಳೆ ಅಲ್ಲಿ ಸೇರಿದ್ದ ಜನ ಆರೋಪಿಗಳ ಬಂಧನಕ್ಕೆ ಬಿಗಿಪಟ್ಟು ಹಿಡಿದು, ಇಂಥ ಹತ್ಯೆ ಇನ್ನೆಷ್ಟು ಕಾಣಬೇಕು, ಕಾನೂನಿನ ಸಡಿಲಿಕೆಯಿಂದಲೇ ಹತ್ಯೆ ಮಾಡಿದವರು ಕೆಲವೇ ದಿನಗಳಲ್ಲಿ ಹೊರಬರುತ್ತಿದ್ದಾರೆ. ಫಾಝಿಲ್ ಹತ್ಯೆ ನಡೆಸಿದವರನ್ನು ಪೊಲೀಸರು ಬಂಧಿಸಿದ್ದರು. ಆದರೆ ಅವರು ಬಂಧನದ ಕೆಲವೇ ದಿನಗಳಲ್ಲಿ ಹೊರಬಂದು ರಾಜಾರೋಷವಾಗಿ ಮೆರೆಯುತ್ತಿದ್ದಾರೆ. ಪೊಲೀಸರು ಹತ್ಯೆಯನ್ನು ಗಂಭೀರವಾಗಿ ತೆಗೆದುಕೊಳ್ಳದ ಕಾರಣದಿಂದಲೇ ಇಂಥ ಹತ್ಯೆ ಇಲ್ಲಿ ಮರುಕಳಿಸುತ್ತಿದೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.
ಇದನ್ನೆಲ್ಲಾ ಶಾಂತವಾಗಿ ಕೇಳಿದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಈ ಹತ್ಯೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಆರೋಪಿಗಳನ್ನು ಆದಷ್ಟು ಶೀಘ್ರದಲ್ಲಿ ಬಂಧಿಸುತ್ತೇವೆ. ನೀವು ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಮುಂದಾಗಬೇಡಿ, ಎಲ್ಲರೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಹಕಾರ ನೀಡಬೇಕುಎಂದು ಹೇಳಿದರು.
ಪೊಲೀಸ್ ಕಮೀಷನರ್ ಶಶಿಕುಮಾರ್ ಅವರ ಭರವಸೆಯ ನಂತರ ಪಾರ್ಥೀವ ಶರೀರವನ್ನು ಕೂಳೂರು ಪಂಜಿಮೊಗೆರು ಜುಮ್ಮಾ ಮಸೀದಿಯಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.