ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ನಗರದ ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರು ಮೂಲದ, ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ, ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸೋನಿಯಾ ಆತ್ಮಹತ್ಯೆಗೈದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದ ಸೋನಿಯಾ, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ ಆಕೆಯ ಗೆಳತಿ ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆರೆದಿರಲಿಲ್ಲ. ಮಲಗಿರಬಹುದೆಂದು ಸ್ವಲ್ಪ ಹೊತ್ತು ಅಲ್ಲೇ ಇದ್ದು, ಮತ್ತೆ ಬಾಗಿಲು ಬಡಿದಾಗಲೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗೆಳತಿ ವಾರ್ಡನ್ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಹಾಸ್ಟೆಲ್ ಸಿಬಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.