ಸುರತ್ಕಲ್ (ವಿಶ್ವ ಕನ್ನಡಿಗ ನ್ಯೂಸ್) : ಕೃಷ್ಣಾಪುರ ನಿವಾಸಿ ಜಲೀಲ್ ಎಂಬವರನ್ನು ನೈತಂಗಡಿ ಎಂಬಲ್ಲಿರುವ ಅವರ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗದಲ್ಲಿ ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಒಟ್ಟು ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಕಾಟಿಪಳ್ಳ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿ.
ಪ್ರಕರಣ ಸಂಬಂಧಿಸಿದಂತೆ ಈ ಮೊದಲು ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24), ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬ ಮೂವರನ್ನು ಬಂಧಿಸಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.